MOEFCC Recruitment 2025

ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ (MoEFCC) ನೇಮಕಾತಿ 2025

ಹಲೋ ಸ್ನೇಹಿತರೇ,
ಇಂದಿನ ಉದ್ಯೋಗ ಮಾಹಿತಿಗೆ ನಿಮ್ಮೆಲ್ಲರಿಗೂ ಹಾರ್ದಿಕ ಸ್ವಾಗತ. ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ (MoEFCC) ತನ್ನ ಅಧೀನದಲ್ಲಿ ಖಾಲಿ ಇರುವ ಅಸೋಸಿಯೇಟ್ ಹುದ್ದೆಗೆ ಅಧಿಕೃತ ಅಧಿಸೂಚನೆಯನ್ನು ಪ್ರಕಟಿಸಿದೆ. ಈ ಹುದ್ದೆಗಳಿಗೆ ಆಸಕ್ತಿ ಹೊಂದಿರುವ ಮತ್ತು ಅರ್ಹತೆಗಳನ್ನು ಪೂರೈಸುವ ಅಭ್ಯರ್ಥಿಗಳು ಈ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿದ ನಂತರ ಅರ್ಜಿ ಸಲ್ಲಿಸಬಹುದು.


MoEFCC ನೇಮಕಾತಿ 2025

🔹 ಹುದ್ದೆಯ ಹೆಸರು: ಅಸೋಸಿಯೇಟ್
🔹 ಒಟ್ಟು ಹುದ್ದೆಗಳ ಸಂಖ್ಯೆ: 01
🔹 ಉದ್ಯೋಗ ಸ್ಥಳ: ಬೆಂಗಳೂರು, ಕರ್ನಾಟಕ


ಅರ್ಜಿ ಸಲ್ಲಿಕೆ ಮತ್ತು ಅರ್ಹತೆಗಳು

ವಿದ್ಯಾರ್ಹತೆ
MoEFCC ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಅಥವಾ LLB ಪೂರ್ಣಗೊಳಿಸಿರಬೇಕು.

ವಯೋಮಿತಿ
ಅಧಿಸೂಚನೆಯ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಗರಿಷ್ಠ ವಯಸ್ಸು 50 ವರ್ಷಗಳ ಒಳಗಿರಬೇಕು.

ಅರ್ಜಿಶುಲ್ಕ
ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿಶುಲ್ಕ ವನ್ನು ವಿಧಿಸಲಾಗಿಲ್ಲ.

ವೇತನ ಶ್ರೇಣಿ
MoEFCC ಅಧಿಕೃತ ಅಧಿಸೂಚನೆಯ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹40,000/- ವೇತನ ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.


ಅರ್ಜಿಸಲ್ಲಿಸುವ ವಿಧಾನ

✅ ಅಧಿಕೃತ ವೆಬ್‌ಸೈಟ್ https://moef.gov.in/ ಗೆ ಭೇಟಿ ನೀಡಿ.
✅ ನೀವು ಅರ್ಜಿ ಸಲ್ಲಿಸಲು ಬಯಸುವ MoEFCC ನೇಮಕಾತಿ ಅಥವಾ ಹುದ್ದೆಗಳನ್ನು ಪರಿಶೀಲಿಸಿ.
✅ ಅಧಿಸೂಚನೆಯ ಲಿಂಕ್‌ನಿಂದ ಅಸೋಸಿಯೇಟ್ ಹುದ್ದೆಗಾಗಿ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ.
✅ ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಪರಿಶೀಲಿಸಿ.
✅ ಯಾವುದೇ ತಪ್ಪುಗಳಿಲ್ಲದೆ ಅರ್ಜಿಯನ್ನು ಸರಿಯಾಗಿ ಭರ್ತಿ ಮಾಡಿ.
✅ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಕೆಳಗಿನ ವಿಳಾಸಕ್ಕೆ ಅರ್ಜಿಯನ್ನು ಕಳುಹಿಸಬೇಕು.


ಅರ್ಜಿಯನ್ನು ಕಳುಹಿಸಲು ವಿಳಾಸ

Dy. Director General of Forests (Central),
Regional Office, Ministry of Environment, Forest & Climate Change,
Kendriya Sadan, E&F Wings, 17th Main Road, IInd Block, Koramangala,
Bengaluru – 560027


ಪ್ರಮುಖ ದಿನಾಂಕಗಳು

📅 ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 31-01-2025
📅 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20-02-2025


ಈ ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸಲು ಬಯಸುವ ಎಲ್ಲಾ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಸರಿಯಾಗಿ ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಕೊನೆಯ ದಿನಾಂಕದೊಳಗೆ ಮೇಲ್ಕಂಡ ವಿಳಾಸಕ್ಕೆ ಕಳುಹಿಸಿ. ಹೆಚ್ಚಿನ ಮಾಹಿತಿ ಹಾಗೂ ನೇರ ಲಿಂಕ್‌ಗಳಿಗಾಗಿ MoEFCC ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.

ಅಭ್ಯರ್ಥಿಗಳಿಗೆ ಶುಭಾಶಯಗಳು!